alex Certify ಭಾರಿ ಮಳೆ: ಮೈಸೂರು, ಗದಗ ಸೇರಿ ಅನೇಕ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ: ಮೈಸೂರು, ಗದಗ ಸೇರಿ ಅನೇಕ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಹಾವೇರಿ, ಧಾರವಾಡ, ಮಂಡ್ಯ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ, ದಾವಣಗೆರೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿಯೂ ಇಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂದಿನ ಶನಿವಾರ ಪೂರ್ತಿ ದಿನ ಶಾಲೆ ನಡೆಸಲು ಆದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...