ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಕಾರಣ ಜೂ. 27 ರಂದು ರಜೆ ನೀಡಲಾಗಿತ್ತು. ಮಳೆ ಮುಂದುವರೆದ ಹಿನ್ನಲೆಯಲ್ಲಿ ಜೂ. 28ರಂದು ಕೂಡ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ, ತುರ್ತು ಸೇವೆಗೆ ಟೋಲ್ ಫ್ರೀ ನಂ.24°7 ಕಂಟ್ರೋಲ್ ರೂಂ – 1077 / 0824-2442590 ಸಂಪರ್ಕಿಸಬಹುದಾಗಿದೆ.