alex Certify ರಜೆ ಮಜೆಯಲ್ಲಿದ್ದ ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ರಿಂದಲೇ ಶಾಲೆ ಆರಂಭಕ್ಕೆ ಸಿದ್ಧತೆ: ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಜೆ ಮಜೆಯಲ್ಲಿದ್ದ ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ರಿಂದಲೇ ಶಾಲೆ ಆರಂಭಕ್ಕೆ ಸಿದ್ಧತೆ: ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲು ಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಕಲಿಕಾ ನಷ್ಟ ಉಂಟಾಗಿದ್ದು, ಇದನ್ನು ಸರಿದೂಗಿಸಲು 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ.

ಅದೇ ರೀತಿ 1 ರಿಂದ 3 ನೇ ತರಗತಿ ಮಕ್ಕಳು ಶಾಲೆ ವಾತಾವರಣಕ್ಕೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ವಿದ್ಯಾ ಪ್ರವೇಶ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಕಾರ್ಯಕ್ರಮಗಳ ಅನುಷ್ಠಾನಕ್ಕೆ ಶಿಕ್ಷಕರಿಗೆ ತರಬೇತಿ ಸೇರಿ ಹಲವು ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸುಮಾರು ಒಂದೂವರೆ ಲಕ್ಷ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಡಿ.ಎಸ್.ಇ.ಆರ್.ಟಿ. ವತಿಯಿಂದ ತರಬೇತಿ ನೀಡಲು ಕ್ರಮಕೈಗೊಳ್ಳಲಾಗಿದೆ. ಶಾಲೆ ಆರಂಭಕ್ಕೆ ಒಂದು ವಾರ ಬಾಕಿ ಉಳಿದಿದ್ದು, ಕಡಿಮೆ ಸಂಖ್ಯೆಯ ಶಿಕ್ಷಕರಿಗೆ ಮಾತ್ರ ತರಬೇತಿ ನೀಡಲಾಗಿದೆ. ಆದರೆ, ಖಾಸಗಿ, ಅನುದಾನಿತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯ 24,500 ಕ್ಕೂ ಹೆಚ್ಚು ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.

ಕಲಿಕಾ ಚೇತರಿಕೆ ಕಾರ್ಯಕ್ರಮದಿಂದ ಮಕ್ಕಳಿಗೆ ಅನುಕೂಲವಾಗುತ್ತದೆ. ಆದರೆ, ಇದನ್ನು ಸರ್ಕಾರಿ ಶಾಲೆಗಳಿಗೆ ಮಾತ್ರ ಸೀಮಿತಗೊಳಿಸಿರುವುದು ಖಾಸಗಿ ಹಾಗೂ ಇತರೆ ಶಾಲೆಗಳ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...