alex Certify ಇಂದು ಶಾಲೆಗಳಿಗೆ ರಜೆ ಘೋಷಣೆ: ಆನೆ ದಾಳಿ ಹಿನ್ನಲೆ ಮುಂಜಾಗ್ರತಾ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಶಾಲೆಗಳಿಗೆ ರಜೆ ಘೋಷಣೆ: ಆನೆ ದಾಳಿ ಹಿನ್ನಲೆ ಮುಂಜಾಗ್ರತಾ ಕ್ರಮ

ಮಡಿಕೇರಿ: ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಹಲವೆಡೆ ಮುಂಜಾಗ್ರತೆ ಕ್ರಮವಾಗಿ ಇಂದು ರಜೆ ಘೋಷಣೆ ಮಾಡಲಾಗಿದೆ.

ಸೋಮವಾರಪೇಟೆಯ ನೆಲ್ಲಿಹುದಿಕೇರಿ, ಅಭ್ಯತ್ ಮಂಗಲ, ಮಡಿಕೇರಿ ತಾಲೂಕಿನ ಹೊಸಕೇರಿ, ಮುರಗೋಡ, ಕಟ್ಟೆಮಾಡು, ಅರೆಕಾಡು, ಗುಯ್ಯ, ಸಿದ್ದಾಪುರದ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿ ಕೊಡಗು ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ನಿನ್ನೆ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ಘಟನೆ ನಡೆದಿತ್ತು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...