alex Certify ಭಾರಿ ಮಳೆ ಹಿನ್ನಲೆ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಹಿನ್ನಲೆ ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ, ಸುರಪುರ, ಹುಣಸಗಿ, ಶಹಾಪುರ, ವಡಗೆರಾ, ಗುರುಮಠಕಲ್ ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಭಾನುವಾರ ಶಾಲೆಗಳನ್ನು ನಡೆಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪಟ್ಟಣದ ಸೇಂಟ್ ಮೇರಿಸ್ ಶಾಲೆ, ವಾಗ್ದೇವಿ ಶಾಲೆ, ಸಹ್ಯಾದ್ರಿ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಉಳಿದ ಶಾಲೆಗಳಿಗೆ ಪರಿಸ್ಥಿತಿ ನೋಡಿ ರಜೆ ನೀಡುವಂತೆ ಬಿಇಒ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...