
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಾಗುತ್ತಿರುವ ಕಾರಣ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನ. 19, 20 ರಂದು ರಜೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನ. 19, 20 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ರಜೆ ನೀಡಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ 19, 20 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 19, 20 ರಂದು ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ ಎಂದು ಹೇಳಲಾಗಿದೆ.