ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಎರಡು ದಿನ ರಜೆ ನೀಡಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.
ಅದೇ ರೀತಿ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 8 ತಾಲೂಕುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ.