ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 5120 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. 3794 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ.ವೈ.ಎ. ನಾರಾಯಣಸ್ವಾಮಿ ಅವರು ರಾಜ್ಯದಲ್ಲಿನ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ಸರ್ಕಾರದ ಗಮನ ಸೆಳೆದಾಗ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿದ್ದಾರೆ.
ಅನುದಾನಿತ ಶಾಲೆಗಳಿಗೆ 1,326 ಬೋಧಕ ಹುದ್ದೆಗಳ ಬರ್ತಿಗೆ 2015ರ ಹಿಂದೆ ಅನುಮತಿ ನೀಡಲಾಗಿದ್ದು, ಖಾಸಗಿ ಶಾಲೆಗಳ ಕೆಲವು ನಿಯಮಗಳಿಂದಾಗಿ ಹುದ್ದೆಗಳು ಭರ್ತಿಯಾಗಿಲ್ಲ. ಅವುಗಳೊಂದಿಗೆ ಇದೀಗ ಖಾಲಿಯಾದ 3794 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕಿದೆ. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಖಾಲಿ ಹುದ್ದೆ ಭರ್ತಿಗೆ ಅನುಮತಿ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.