ಬೆಂಗಳೂರು: ಅಕ್ಟೋಬರ್ 21 ರ ಗುರುವಾರದಿಂದ ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಬಿಸಿಯೂಟ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಅಡುಗೆ ಕೋಣೆ, ದಾಸ್ತಾನು ಕೊಠಡಿ, ಕುಡಿಯುವ ನೀರಿನ ಸ್ಥಳಗಳನ್ನು ಸ್ವಚ್ಛಗೊಳಿಸಬೇಕು. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆಹಾರಧಾನ್ಯಗಳನ್ನು ಪರಿಶೀಲಿಸಿಕೊಳ್ಳಬೇಕು. ಅವಧಿ ಮೀರಿದ ಪದಾರ್ಥಗಳನ್ನು ಬಳಸಬಾರದು. ಸ್ಟವ್ ದುರಸ್ತಿ ಇದ್ದರೆ ದುರಸ್ತಿ ಮಾಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.
ಅಕ್ಟೋಬರ್ 21 ರೊಳಗೆ ಅಕ್ಕಿ, ಗೋಧಿ ಸರಬರಾಜು ಮಾಡಲಿದ್ದು, ಉಳಿದ ಆಹಾರ ಪದಾರ್ಥಗಳ ಖರೀದಿಗೆ ವಿದ್ಯಾರ್ಥಿಗಳ ಪರಿವರ್ತನಾ ನಿಧಿ ಬಳಸಿಕೊಳ್ಳಬೇಕೆಂದು ತಿಳಿಸಲಾಗಿದೆ. ಬಿಸಿಯೂಟಕ್ಕೆ ನಿಗದಿಪಡಿಸಲಾದ ಶಾಲಾ ಸಿಬ್ಬಂದಿ ಅಕ್ಟೋಬರ್ 20ರೊಳಗೆ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿ ಸಿದ್ಧತೆ ಮಾಡಿಕೊಳ್ಳಬೇಕೆಂದು ಹೇಳಲಾಗಿದೆ.