
ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 22 ರಿಂದ ಆರರಿಂದ ಎಂಟನೇ ತರಗತಿಗಳು ಆರಂಭವಾಗಲಿವೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಬಿಬಿಎಂಪಿ ಮತ್ತು ಕೇರಳ ಗಡಿ ಭಾಗದ ಶಾಲೆಗಳಲ್ಲಿ ವಿದ್ಯಾಗಮ ನಡೆಯಲಿದೆ. 6 ಹಾಗೂ 7 ನೇ ತರಗತಿಯ ಮಕ್ಕಳಿಗೆ ವಿದ್ಯಾಗಮ ನಡೆಸಲಾಗುವುದು. ಬೆಂಗಳೂರು ನಗರ ಪ್ರದೇಶದಲ್ಲಿ 8ನೇ ತರಗತಿ ಮಾತ್ರ ಆರಂಭವಾಗಲಿದೆ.
ಆರರಿಂದ ಮೇಲಿನ ತರಗತಿ ಮಕ್ಕಳಿಗೆ ಮನೆಯಿಂದಲೇ ಊಟ ತರಬೇಕು. ದೈಹಿಕ ಅಂತರ, ಶುಚಿತ್ವ ಕಾಪಾಡುವುದು, ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿರುತ್ತದೆ. 6 ರಿಂದ 10 ನೇ ತರಗತಿಗೆ ವಾರದಲ್ಲಿ ಐದು ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಹೇಳಲಾಗಿದೆ.