
ಬೆಂಗಳೂರು: ಶಿಕ್ಷಣ ಸಚಿವರ ಸೂಚನೆ ಮೇರೆಗೆ ಶಾಲಾ, ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ.
ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ(1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ.
ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಈ ಮೊಬೈಲ್ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗದಿಪಡಿಸಲಾಗಿದೆ.

