
ಬೆಂಗಳೂರು: ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 6 ರಿಂದ 6, 7, 8 ನೇ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ವಾರದಲ್ಲಿ 5 ದಿನ ಶೇಕಡ 50 ರಷ್ಟು ವಿದ್ಯಾರ್ಥಿಗಳೊಂದಿಗೆ ಶಾಲೆಗಳನ್ನು ನಡೆಸಲಾಗುವುದು. ಕೊರೋನಾ ಮಾರ್ಗಸೂಚಿಗಳೊಂದಿಗೆ ಶಾಲೆ ಆರಂಭಿಸಲು ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ.