alex Certify BIG NEWS: ಆಗಸ್ಟ್ ಮೊದಲ ವಾರದಿಂದ ಶಾಲೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಗಸ್ಟ್ ಮೊದಲ ವಾರದಿಂದ ಶಾಲೆ ಆರಂಭ

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಮುಂದಾದರೆ ಮೊದಲಿಗೆ ಪ್ರಾಥಮಿಕ ಹಂತದ ಶಾಲೆಗಳನ್ನು ಆರಂಭಿಸುವುದು ಉತ್ತಮ ಎಂದು ಐಸಿಎಂಆರ್ ಸಲಹೆ ನೀಡಿದೆ.

ರಾಜ್ಯದಲ್ಲಿ ಆಗಸ್ಟ್ ಮೊದಲ ವಾರದಿಂದ ಶಾಲೆ, ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಹೇಳಲಾಗಿದೆ.

ಮೊದಲಿಗೆ 10, 12 ನೇ ತರಗತಿ, ನಂತರ 8,9 ಮತ್ತು 11 ನೇ ತರಗತಿಗಳನ್ನು ಆರಂಭಿಸಲಾಗುವುದು. ಬಳಿಕ 5, 6, 7 ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಆರಂಭಿಸುವ ಸಾಧ್ಯತೆ ಇದೆ. 5, 6, 7 ನೇ ತರಗತಿಗೆ ಮಕ್ಕಳಿಗೆ ಮೊದಲಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ತರಗತಿಗಳನ್ನು ಆರಂಭಿಸಲಾಗುವುದು. ನಂತರ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ಆರಂಭಿಸಲಾಗುತ್ತದೆ. ಹೀಗೆ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...