alex Certify BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಿಸಲು ಮಹತ್ವದ ನಿರ್ಧಾರ, ಇಂದು ಸಿಎಂ ನೇತೃತ್ವದ ಸಭೆ ಬಳಿಕ ದಿನಾಂಕ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭಿಸಲು ಮಹತ್ವದ ನಿರ್ಧಾರ, ಇಂದು ಸಿಎಂ ನೇತೃತ್ವದ ಸಭೆ ಬಳಿಕ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದಲ್ಲಿ ಒಂದರಿಂದ ಐದನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಇಂದು ನಿರ್ಧಾರ ಕೈಗೊಳ್ಳಲಾಗುತ್ತದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ನಡೆಸಲಾಗುವುದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ತಜ್ಞರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ.

ಸಭೆಯ ಬಳಿಕ ಶಾಲೆ ಆರಂಭ ದಿನಾಂಕ ಹೊರಬೀಳುವ ಸಾಧ್ಯತೆಯಿದೆ. ಅಕ್ಟೋಬರ್ 21 ರಿಂದ ಕಿರಿಯ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಅಕ್ಟೋಬರ್ 21 ರಿಂದ ಶಾಲೆಗಳಲ್ಲಿ ಬಿಸಿಯೂಟ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಅಂದಿನಿಂದಲೇ ಒಂದರಿಂದ ಐದನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಕ್ರಮ ಮಾಡಿಕೊಂಡಿದೆ.

ಸಿಎಂ ನೇತೃತ್ವದಲ್ಲಿ ಇಂದು ಸಭೆ ನಡೆದ ನಂತರ 1 ರಿಂದ 5 ನೇ ತರಗತಿ ಆರಂಭಿಸುವ ಕುರಿತು ಕೈಗೊಂಡ ತೀರ್ಮಾನ ಪ್ರಕಟಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...