ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ.
ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು.
ಶಾಲೆ ಆರಂಭದ ಬಗ್ಗೆ ಚರ್ಚಿಸಲು ಸಿಎಂ ಕರೆ ಮಾಡಿದ್ದಾರೆ. ಸಿಎಂ ಭೇಟಿ ಮಾಡಿ ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಸಲಾಗುವುದು. ಶಾಲೆಗಳ ಆರಂಭದ ಬಗ್ಗೆ ದುಡುಕಿನ ನಿರ್ಧಾರ ಬೇಡ ಎಂದು ಸಿಎಂ ತಿಳಿಸಿದ್ದಾರೆ. ಸಿಎಂ ಮಾತಿಗೆ ಗೌರವ ಕೊಟ್ಟು ಶಾಲೆಗಳ ಆರಂಭ ಕುರಿತಂತೆ ಮತ್ತಷ್ಟು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ರುಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಹೇಳಿದ್ದಾರೆ.