ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಶಾಲೆಗಳನ್ನು ಕೂಡ ಆಗಸ್ಟ್ 2 ರಿಂದ ಆರಂಭಿಸಬಹುದು ಎಂದು ಹೇಳಲಾಗಿತ್ತು. ಆದರೆ, ಸರ್ಕಾರದ ಮಟ್ಟದಲ್ಲಿ ಶಾಲೆ ಆರಂಭಿಸುವ ಕುರಿತಂತೆ ತೀರ್ಮಾನ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಶಾಲೆಗಳು ಆರಂಭವಾಗುವುದಿಲ್ಲ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾಸಗಿ ಶಾಲೆಗಳು ಮಾರ್ಗಸೂಚಿ ಉಲ್ಲಂಘಿಸಿ ಶಾಲೆಗಳನ್ನು ಆರಂಭಿಸುವಂತಿಲ್ಲ ಎಂದು ಹೇಳಿದ್ದಾರೆ. ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಆಯುಕ್ತರ ನೇತೃತ್ವದಲ್ಲಿ ವರದಿ ಸಲ್ಲಿಸಿದೆ. ಆದರೆ, ಸರ್ಕಾರದ ವತಿಯಿಂದ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ಆಗಸ್ಟ್ 2 ರಿಂದ ಶಾಲೆಗಳು ಆರಂಭವಾಗುವುದಿಲ್ಲ ಎಂದು ಹೇಳಲಾಗಿದೆ.