ಬೆಂಗಳೂರು: ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಮಕ್ಕಳಿಗೆ ಡಿಸೆಂಬರ್ 15 ರಿಂದ ಶಾಲೆ-ಕಾಲೇಜು ಆರಂಭವಾಗುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
ಪೋಷಕರು ಮತ್ತು ಖಾಸಗಿ ಶಾಲೆಗಳ ಮುಖ್ಯಸ್ಥರು ಶಾಲೆಗಳ ಆರಂಭಕ್ಕೆ ಸಮ್ಮತಿಸಿದ್ದು, ದೀಪಾವಳಿ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಈ ಕುರಿತು ವರದಿ ಸಲ್ಲಿಸಲಾಗಿದೆ. ಮತ್ತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಪಾಳಿ ವ್ಯವಸ್ಥೆಯಲ್ಲಿ ಶಾಲೆ ಆರಂಭಿಸಬೇಕು, ಸಮವಸ್ತ್ರ ಶೂ, ಸಾಕ್ಸ್ ಧರಿಸಲು ಆಡಳಿತ ಮಂಡಳಿಗಳು ಮಾಡಬಾರದು, ತರಗತಿ ಆರಂಭದ ಹೆಸರಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು ಎಂಬುದು ಸೇರಿದಂತೆ ಪೋಷಕರು ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಸರ್ಕಾರದಿಂದಲೇ ಕೋವಿಡ್ ಟೆಸ್ಟ್ ಕಿಟ್ ಶಾಲೆಗಳಿಗೆ ಉಚಿತವಾಗಿ ನೀಡಬೇಕು ಎಂಬುದು ಸೇರಿದಂತೆ ಖಾಸಗಿ ಆಡಳಿತ ಮಂಡಳಿಗಳು ವಿವಿಧ ಬೇಡಿಕೆ ಮುಂದಿಟ್ಟಿವೆ. ಇವೆಲ್ಲ ಬೇಡಿಕೆಗಳನ್ನು ಒಳಗೊಂಡ ವರದಿಯನ್ನು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಇಲಾಖೆ ಆಯುಕ್ತರು ಸಲ್ಲಿಸಿದ್ದಾರೆ ಎನ್ನಲಾಗಿದೆ.