
ಚಾಮರಾಜನಗರ: ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಎಲ್ಲ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆದಿದೆ.
ಈ ಕುರಿತಾಗಿ ತೀರ್ಮಾನ ಕೈಗೊಳ್ಳಲು ಜನವರಿ 27 ರಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರೊಂದಿಗೆ ಸಭೆ ಕರೆಯಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಒಂದರಿಂದ 9ನೇ ತರಗತಿ, ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಬೇಡಿಕೆ ಇದ್ದು, ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಅರ್ಧ ದಿನದ ಬದಲಿಗೆ ಪೂರ್ಣ ದಿನ ನಡೆಸಬೇಕೆಂಬ ಬೇಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.