ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಾಂಬ್ ಪತ್ತೆ ದಳ ಪರಿಶೀಲನೆ ನಡೆಸಿದೆ.
ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆಶಿ ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.
ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು, ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬಾಂಬ್ ಬೆದರಿಕೆ ಕೇಳಿಬಂದ ಕೂಡಲೇ ಆತಂಕಗೊಂಡ ಪೋಷಕರು ಶಾಲೆ ಬಳಿಗೆ ಬಂದು ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ.