alex Certify Bomb Threat : ಡಿಸಿಎಂ ಡಿ.ಕೆ ಶಿವಕುಮಾರ್ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ, ತೀವ್ರ ತಪಾಸಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bomb Threat : ಡಿಸಿಎಂ ಡಿ.ಕೆ ಶಿವಕುಮಾರ್ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ, ತೀವ್ರ ತಪಾಸಣೆ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಬಾಂಬ್ ಪತ್ತೆ ದಳ ಪರಿಶೀಲನೆ ನಡೆಸಿದೆ.

ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆಶಿ ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.

ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು, ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬಾಂಬ್ ಬೆದರಿಕೆ ಕೇಳಿಬಂದ ಕೂಡಲೇ ಆತಂಕಗೊಂಡ ಪೋಷಕರು ಶಾಲೆ ಬಳಿಗೆ ಬಂದು ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...