alex Certify 2022 -23 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2022 -23 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. ಮಗುವಿನ SATS NUMBER, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಪಡಿತರ ಚೀಟಿಯ ಜೆರಾಕ್ಸ್ ಹಾಗೂ ಮಗುವಿನ ಇತ್ತೀಚಿನ ಭಾವಚಿತ್ರ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kea.kar.nic.in, http://kreis.kar.nic.in  ಅಥವಾ ದೂರವಾಣಿ ಸಂಖ್ಯೆ 0836-2447201 ಸಂಪರ್ಕಿಸಬಹುದು ಎಂದು ಧಾರವಾಡ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...