ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಡಿಮೆ ಇದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಕಡಿಮೆ ಇರುವುದರಿಂದ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
1 ರಿಂದ 10 ನೇ ತರಗತಿ ಮಕ್ಕಳಲ್ಲಿ ಸೋಂಕು ಕಂಡುಬಂದಿಲ್ಲ. ಕೆಲವು ಪಿಯು ಕಾಲೇಜಿನಲ್ಲಿ ಕೆಲವು ಮಕ್ಕಳಿಗೆ, ಶಿಕ್ಷಕರಿಗೆ ಸೇರಿ 171 ಮಂದಿಗೆ ಸೋಂಕು ತಗುಲಿದ್ದು, 100 ಜನ ಗುಣಮುಖರಾಗಿದ್ದಾರೆ. ದ್ವಿತೀಯ ಪಿಯುಸಿ ಮಕ್ಕಳಿಗೆ ಅರ್ಧವಾರ್ಷಿಕ ಪರೀಕ್ಷೆ ನಡೆಯುತ್ತಿದೆ. ಈಗ ಇರುವ ಮಾರ್ಗಸೂಚಿಗಳನ್ನು ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.
ಸೋಂಕು ಕಂಡು ಬಂದ ವಸತಿ ಶಾಲೆಗಳಲ್ಲಿ ನಿಗಾ ವಹಿಸಲಾಗಿದೆ. ಹಾಸ್ಟೆಲ್, ಶಾಲೆಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.