ಬೆಂಗಳೂರು: ಕೊರೋನಾ ಲಾಕ್ಡೌನ್ ಜಾರಿ ಮಾಡಿದ ಕಾರಣದಿಂದಾಗಿ ರಾಜ್ಯದಲ್ಲಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಬಿಸಿಯೂಟ ಪೂರೈಕೆ ಸ್ಥಗಿತವಾಗಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಪಡಿತರದೊಂದಿಗೆ ಭತ್ಯೆ ನೀಡಲೇಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಡಿಸೆಂಬರ್ 8 ರಂದು ವಿವರಣೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿಂದ ಸೂಚನೆ ನೀಡಲಾಗಿದೆ. ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಜನರಿಗೆ ಉಂಟಾದ ತೊಂದರೆ ಪರಿಹರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್ ಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿಯವರ ಪೀಠದಲ್ಲಿ ನಡೆದಿದೆ.
ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಬಿಸಿಯೂಟ ಪೂರೈಕೆ ಸ್ಥಗಿತಗೊಳಿಸಿದ ಕಾರಣ ಅರ್ಹ ಫಲಾನುಭವಿಗಳಿಗೆ ಪಡಿತರದೊಂದಿಗೆ ಭತ್ಯೆ ನೀಡುವಂತೆ ತಿಳಿಸಿಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಿಸೆಂಬರ್ 8 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.