ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಚರ್ಚೆ ನಡೆಸಿ ವರದಿ ಸಲ್ಲಿಸಿದ್ದು, ದೀಪಾವಳಿ ಬಳಿಕ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗುತ್ತದೆ. ಡಿಸೆಂಬರ್ ವೇಳೆಗೆ ಶಾಲೆ ಆರಂಭವಾಗುತ್ತವೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಸದ್ಯಕ್ಕೆ ಶಾಲೆಗಳ ಆರಂಭ ಮಾಡದಿರಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಶಾಲೆಗಳನ್ನು ತೆರೆಯುವ ತೀರ್ಮಾನ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಹಂತಹಂತವಾಗಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಚರ್ಚೆ ನಡೆದಿದೆ. ಈಗಿನ ಸಂದರ್ಭದಲ್ಲಿ ಶಾಲೆ ಆರಂಭಿಸಿದರೆ ಸಮಸ್ಯೆಯಾಗಬಹುದು ಎಂದು ಕೆಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಿಎಂ ಯಡಿಯೂರಪ್ಪ ಸಮ್ಮತಿಸಿದ್ದು, ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಿರಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.