ಬೆಂಗಳೂರು: ಶಾಲೆ ಆರಂಭದ ಬಗ್ಗೆ ತಿಂಗಳ ಅಂತ್ಯಕ್ಕೆ ಸಭೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಡಿಸೆಂಬರ್ ಅಂತ್ಯಕ್ಕೆ ವಿವಿಧ ಇಲಾಖೆಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಲೆ, ಕಾಲೇಜು ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಡಿಸೆಂಬರ್ ಕೊನೆಯ ವಾರ ಸೋಂಕಿತರ ಪ್ರಮಾಣವನ್ನು ಪರಿಶೀಲನೆ ನಡೆಸಿ, 10 ಮತ್ತು 12 ನೇ ತರಗತಿಗಳನ್ನು ಆರಂಭಿಸಲು ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ 10 ಮತ್ತು 12 ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.