alex Certify ದಸರಾ ರಜೆ ಮುಕ್ತಾಯ: ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭ, ಕೆಲವು ಜಿಲ್ಲೆಗಳಲ್ಲಿ ರಜೆ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ರಜೆ ಮುಕ್ತಾಯ: ರಾಜ್ಯಾದ್ಯಂತ ಇಂದಿನಿಂದ ಶಾಲೆ ಪುನಾರಂಭ, ಕೆಲವು ಜಿಲ್ಲೆಗಳಲ್ಲಿ ರಜೆ ಮುಂದುವರಿಕೆ

ಬೆಂಗಳೂರು: ದಸರಾ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಲಿವೆ. ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ದಸರಾ ರಜೆ ಮುಕ್ತಾಯವಾಗಿದ್ದು, ಅಕ್ಟೋಬರ್ 25ರ ಇಂದಿನಿಂದ ಶಾಲೆಗಳು ಶುರುವಾಗಲಿವೆ.

ಶೈಕ್ಷಣಿಕ ವೇಳಾಪಟ್ಟಿ ಅನ್ವಯ ಎರಡನೆಯ ಅವಧಿಯ ಶಾಲಾ ಕರ್ತವ್ಯ ದಿನಗಳು ಇಂದಿನಿಂದ ಆರಂಭವಾಗಿ 2024ರ ಏಪ್ರಿಲ್ 10ರವರೆಗೆ ನಡೆಯಲಿವೆ. ಪ್ರಸ್ತುತ ನೀಡಿದ ರಜೆ ಮುಂದುವರಿಸಬೇಕೆಂದು ಶಿಕ್ಷಕರ ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ, ರಜೆ ಮುಂದುವರೆಸುವ ಕುರಿತು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿಲ್ಲ.

ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ದಸರಾ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು ಆರಂಭವಾಗಲಿವೆ. ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಕೂಡ ರಜೆ ಮುಂದುವರೆದಿದ್ದು, ನಾಳೆಯಿಂದ ಶಾಲೆಗಳು ಆರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...