ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟ ವಿತರಿಸುವ ಕಾರ್ಯದಲ್ಲಿ ಲೋಪ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ 98 ಅಧಿಕಾರಿಗಳಿಗೆ ನೋಟಿಸ್ ನೀಡಿದೆ.
ಪಿಎಂ ಪೋಷಣ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಷನ್ ನಿಂದ ನಾಲ್ಕು ಸೇರಿ ವಾರಕ್ಕೆ 6 ಮೂಟ್ಟೆಗಳನ್ನು 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಗೂ ಅನುದಾನಿತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುತ್ತಿದೆ.
ಆದರೆ ಶಾಲಾ ಮಕ್ಕಳಿಗೆ ವಾರಕ್ಕೆ 6 ದಿನ ಸಮರ್ಪಕವಾಗಿ ಬೇಸಿದ ಮೊಟ್ಟೆ ಪೂರೈಸುವಲ್ಲಿ ವಿಫಲರಾದ 98 ಅಧಿಕಾರಿಗಳಿಗೆ ನೋಟಿಸ್ ನಿಡಲಾಗಿದೆ.
ಅಜಿಂ ಪ್ರೇಮ್ ಜಿ ಫೌಂಡೆಷನ್ ಇತ್ತೀಚೆಗೆ ನಡೆಸಿದ ಮೌಲ್ಯಮಾಪನದಲ್ಲಿ ನಾಲ್ಕು ವಿಭಾಗಗಳ 357 ಶಾಲೆಗಳಿಗೆ ಭೇಟಿ ನೀಡಿದಾಗ 66 ಶಾಲೆಗಳು ಈವರೆಗೂ ಮೊಟ್ಟೆ ವಿತರಿಸಿಲ್ಲ ಎಂದು ತಿಳಿದುಬಂದಿದೆ.
ಫೌಂಡೇಷನ್ ಪ್ರತಿನಿಧಿಗಳು ಸಿದ್ಧಪಡಿಸಿರುವ ವರದಿ ಆಧರಿಸಿ ಅನುಷ್ಠಾನದ ಹೊಣೆ ಸಮರ್ಪಕವಾಗಿ ನಿಭಾಯಿಸದ 50 ಸಿಬ್ಬಂದಿಗಳು ಹಾಗೂ ಪಿಎಂ ಪೋಷಣ್ ಅಭಿಯಾನದ 48 ಸಹಾಯಕ ನಿರ್ದೇಶಕರು ಸೇರಿ 98 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.