ಬೆಂಗಳೂರು: ರಾಜ್ಯದಲ್ಲಿ ಸೋಂಕು ಹೆಚ್ಚಾಗಿದ್ದು, ಕೊರೋನಾ ಎರಡನೇ ಅಲೆ ಕುರಿತಾದ ಆತಂಕ ಶುರುವಾಗಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಾವರೆಕೆರೆಯಲ್ಲಿ ಮಾತನಾಡಿದ ಅವರು, ಕೊರೋನಾ ಪ್ರಕರಣಗಳನ್ನು ನಾವು ಜಾಸ್ತಿ ಮಾಡುತ್ತಿದ್ದೇವೆ. ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಆದರೆ, ಶಾಲೆಗಳಲ್ಲಿ ಮಕ್ಕಳು ನಡೆದುಕೊಳ್ಳುತ್ತಿರುವ ರೀತಿ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.
ಶಾಲಾ ಮಕ್ಕಳು ನಡೆದುಕೊಳ್ಳುತ್ತಿರುವ ರೀತಿ ರಾಜ್ಯಕ್ಕೆ ಮಾದರಿಯಾಗಿದೆ. ಕೊರೊನಾದೊಂದಿಗೆ ನಾವು ಬದುಕುವುದನ್ನು ಕಲಿಯಬೇಕು. ಕೊರೋನಾ ನಿಯಂತ್ರಣಕ್ಕೆ ಸರ್ಕಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು ನಾಗರಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.