
ಬೆಂಗಳೂರು: ಸರ್ಕಾರಿ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2022 -23 ನೇ ಸಾಲಿನ ದಾಖಲಾತಿ ಆಧಾರದ ಮೇಲೆ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ಕೊರತೆ ಇರುವ ಶಾಲೆಗಳಿಗೆ ಮರು ಹೊಂದಾಣಿಕೆ ಮಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಬಗ್ಗೆ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ಜೂನ್ 18 ರಿಂದ ಜುಲೈ 6 ರವರೆಗೆ ಹೊಂದಾಣಿಕೆ ಪ್ರಕ್ರಿಯೆ ನಡೆಸಿ ಪೂರ್ಣಗೊಳಿಸಬೇಕೆಂದು ತಿಳಿಸಿದ್ದಾರೆ.