
ಮೈಸೂರು: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಬೆಳಗಾವಿಯ ಶಾಲೆಯೊಂದರ ಮಕ್ಕಳು ಬಸ್ ನಲ್ಲಿ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಾಸ್ ಆಗುತಿದ್ದಾಗ ಬಸ್ ಮೈಸೂರಿನ ಫೌಂಟೇನ್ ವೃತ್ತದ ಬಳಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿದೆ.
ಅಪಘಾತದಲ್ಲಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ಮೈಸುರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬಸ್ ನಲ್ಲಿ ಒಟ್ಟು 30 ಮಕ್ಕಳು ಇದ್ದರು ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಶಾಂತಿನಿಕೇತನ ಶಾಲೆಯ ಮಕ್ಕಳು ಶಿಕ್ಷಕರೊಂದಿಗೆ ಮೈಸೂರು ಪ್ರವಾಸಕ್ಕಾಗಿ ತೆರಳಿದ್ದರು. ಈ ವೇಳೆ ಘಟನೆ ನಡೆದಿದೆ.