ಬೆಂಗಳೂರು : ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.