ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಇಸ್ರೋ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು.

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನದ ವಿಕ್ರಮ್ ಲ್ಯಾಂಡರ್ ಯಶಸ್ವಿ ಲ್ಯಾಂಡಿಂಗ್ ಸಾಧನೆ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ.

ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ಸಿಎಂ ತಿಳಿಸಿದ್ದಾರೆ.

https://twitter.com/CMofKarnataka/status/1694339158217756812

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read