ಎಡಿನ್ ಬರ್ಗ್: ವಿಶ್ವದಲ್ಲೇ ಮೊದಲ ಬಾರಿಗೆ ಸ್ಕಾಟ್ಲೆಂಡ್ ನಲ್ಲಿ ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಸೇರಿದಂತೆ ಎಲ್ಲ ಪೀರಿಯಡ್ಸ್ ಉತ್ಪನ್ನಗಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.
ಸ್ಕಾಟ್ಲೆಂಡ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಮಹಿಳೆಯರಿಗೆ ಪೀರಿಯಡ್ಸ್ ಸಂದರ್ಭದಲ್ಲಿ ಬಳಸುವ ವಸ್ತುಗಳನ್ನು ಉಚಿತವಾಗಿ ನೀಡುತ್ತಿರುವ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದಕ್ಕೆ ಸಂಬಂಧಿಸಿದ ದಿ ಪಿರಿಯೆಡ್ಸ್ ಪ್ರಾವಿಷನ್ ಕಾಯ್ದೆಯನ್ನು ಸ್ಕಾಟ್ಲೆಂಡ್ ಪಾರ್ಲಿಮೆಂಟ್ ನಲ್ಲಿ ಯಾವುದೇ ವಿರೋಧವಿಲ್ಲದೇ ಅಂಗೀಕರಿಸಲಾಗಿದೆ. ಇದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ವಿಶ್ವದಲ್ಲೇ ಮೊದಲ ಬಾರಿಗೆ ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಬಳಸುವ ವಸ್ತುಗಳನ್ನು ಉಚಿತವಾಗಿ ನೀಡಲು ಕ್ರಮ ಕೈಗೊಂಡಿರುವ ಸ್ಕಾಟ್ಲೆಂಡ್ ಸರ್ಕಾರದ ನಿರ್ಧಾರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.