alex Certify ಕಾಶಿ ವಿಶ್ವನಾಥನ ದರ್ಶನಕ್ಕಾಗಿ ಬಂದ ಭಕ್ತರು – ದೇವಸ್ಥಾನದ ಸಿಬ್ಬಂದಿ ನಡುವೆ ಮಾರಾಮಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಶಿ ವಿಶ್ವನಾಥನ ದರ್ಶನಕ್ಕಾಗಿ ಬಂದ ಭಕ್ತರು – ದೇವಸ್ಥಾನದ ಸಿಬ್ಬಂದಿ ನಡುವೆ ಮಾರಾಮಾರಿ

ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದೊಳಗೆ ಶನಿವಾರ ಭಕ್ತರು ಮತ್ತು ದೇವಾಲಯದ ಕೆಲವು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ.

ಕಾಶಿ ವಿಶ್ವನಾಥ ದೇವಾಲಯದ ಒಳಗಿನ ಆವರಣದಲ್ಲಿ ದೇವಳದ ನಾಲ್ವರು ಸಿಬ್ಬಂದಿ ಮತ್ತು ಇಬ್ಬರು ಭಕ್ತರು ಪರಸ್ಪರ ತಳ್ಳುತ್ತಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು.

ಶನಿವಾರ ಸಂಜೆ ದೇವಾಲಯದ ಗರ್ಭಗುಡಿಯಲ್ಲಿ ‘ಆರತಿ’ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ಬಾಗಿಲು ಹಾಕಿದ್ದರೂ ಭಕ್ತರು ದರ್ಶನಕ್ಕೆ ಪಟ್ಟು ಹಿಡಿದರು. ಈ ವೇಳೆ ಭಕ್ತರು ಮತ್ತು ದೇವಾಲಯದ ಸಿಬ್ಬಂದಿ ಪರಸ್ಪರ ತಳ್ಳಲು ಪ್ರಾರಂಭಿಸಿದಾಗ ವಾಗ್ವಾದ ಪ್ರಾರಂಭವಾಯಿತು.

ಈ‌ ನಡುವೆ ಇಬ್ಬರು ಭಕ್ತರು ಘಟನೆಯ ನಂತರ ನಾಲ್ವರು ದೇವಾಲಯದ ಸಿಬ್ಬಂದಿ ಸೇರಿದಂತೆ ಐದು ಜನರ ವಿರುದ್ಧ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...