ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರ/ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಜನವರಿ 24 ರಂದು ಆಯೋಗದಿಂದ ನಡೆಸಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ ಫೆಬ್ರವರಿ 28 ರಂದು ನಡೆಸಲಾಗಿದೆ.
ಹಿರಿಯ ಸಹಾಯಕರ/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಕೈಗೊಳ್ಳಲು ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 20 ರಂದು ನಿಗದಿಯಾಗಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು 21 ರಂದು ನಿಗದಿಯಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಗಳ ಪರಿಷ್ಕೃತ ದಿನಾಂಕದ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಲೋಕಸೇವಾ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.