ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1323 ದ್ವಿತೀಯ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಇಂದು ಪ್ರಕಟಿಸಲಿದೆ.
1323 ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಇಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಈ ಮೊದಲು ಲೋಕಸೇವಾ ಆಯೋಗ ತಿಳಿಸಿದಂತೆ ನವೆಂಬರ್ 17 ರಂದು ಆಯ್ಕೆಪಟ್ಟಿ ಪ್ರಕಟಿಸಬೇಕಿತ್ತು. ಆದರೆ, ಕಾರಣಾಂತರದಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದಂದು 1,323 ದ್ವಿತೀಯ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.