alex Certify SDA ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಇಂದು 1323 ಎಸ್.ಡಿ.ಎ. ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SDA ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಇಂದು 1323 ಎಸ್.ಡಿ.ಎ. ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1323 ದ್ವಿತೀಯ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಇಂದು ಪ್ರಕಟಿಸಲಿದೆ.

1323 ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಇಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಈ ಮೊದಲು ಲೋಕಸೇವಾ ಆಯೋಗ ತಿಳಿಸಿದಂತೆ ನವೆಂಬರ್ 17 ರಂದು ಆಯ್ಕೆಪಟ್ಟಿ ಪ್ರಕಟಿಸಬೇಕಿತ್ತು. ಆದರೆ, ಕಾರಣಾಂತರದಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದಂದು 1,323 ದ್ವಿತೀಯ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...