ಚಿತ್ರದುರ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ‘ಸಿ’ ವೃಂದದ ಹುದ್ದೆಗೆ ನೇಮಕಾತಿಗೆ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಪ್ರಕಟಿಸಲಾದ ಅಧಿಸೂಚನೆಗೆ ತಿದ್ದುಪಡಿ ತರಲಾಗಿದ್ದು, ಪರೀಕ್ಷೆಯ ವಿಷಯಗಳಿಗೆ ಸಂಬಂಧಿಸಿದಂತೆ ಪರಿಷ್ಕರಣೆ ಮಾಡಲಾಗಿದೆ.
ಅಕ್ಟೋಬರ್ ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಸ್ಪರ್ದಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹುಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲಿಷ್/ಕಂಪ್ಯೂಟರ್ ಜ್ಞಾನ ಹಾಗೂ ಪ್ರಶ್ನೆ ಪತ್ರಿಕೆ-2 ಸಾಮಾನ್ಯ ಜ್ಞಾನ ಎಂದು ಪ್ರಕಟಿಸಲಾಗಿತ್ತು. ಈ ಪ್ರಕಟಣೆಗೆ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದ್ದು, ಇದರನ್ವಯ ಸ್ಪರ್ಧಾತ್ಮಕ ಪರೀಕ್ಷೆಗಳ ವಸ್ತುನಿಷ್ಠ ಬಹುಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಜ್ಞಾನ ಹಾಗೂ ಪ್ರಶ್ನೆ ಪತ್ರಿಕೆ-2 ಸಾಮಾನ್ಯ ಕನ್ನಡ/ಸಾಮಾನ್ಯ ಇಂಗ್ಲಿಷ್ /ಕಂಪ್ಯೂಟರ್ ಜ್ಞಾನ ಎಂದು ಪರಿಷ್ಕರಿಸಲಾಗಿದೆ.
ಈಗಾಗಲೇ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಮಾಜಿ ಸೈನಿಕ ಅಭ್ಯರ್ಥಿಗಳು ಈ ಮಾಹಿತಿಯನ್ನು ಕರ್ನಾಟಕ ರಾಜ್ಯ ಪತ್ರ ಜನವರಿ 13, 2023 ರ ಸಂಚಿಕೆ: 215 ಭಾಗ 5 ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ : 08182-220925 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿರುತ್ತಾರೆ.