ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಆರೋಪ ಮಾಡಿ ಎಸ್.ಡಿ.ಎ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಜಾನಕಲ್ ಗ್ರಾಮದಲ್ಲಿ ನಡೆದಿದೆ.
ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವ ಎಸ್.ಡಿ.ಎ. ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ಎಸ್.ಡಿ.ಎ ಆಗಿದ್ದರು. ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ನಲ್ಲಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಹಾಗೂ ನಾಲ್ಕು ಜನ ಗ್ರಾಮ ಪಂಚಾಯಿತಿ ಸದಸ್ಯರು ತನಗೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.