ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಕುತೂಹಲ ಮೂಡಿಸಿದೆ. ರುದ್ರಣ್ಣ ಅವರನ್ನು ಕೊಲೆ ಮಾಡಲಾಗಿದ್ದು, ಕಚೇರಿಯ ವಾಹನ ಚಾಲಕನನ್ನು ವಿಚಾರಣೆಗೊಳಪಡಿಸಬೇಕು ಎನ್ನುವ ಮಾಹಿತಿ ಇರುವ ಅನಾಮಧೇಯ ಪತ್ರವೊಂದು ಪೊಲೀಸ್ ಠಾಣೆಗೆ ಬಂದಿದೆ ಎನ್ನಲಾಗಿದೆ.
ತಹಶೀಲ್ದಾರ್ ಕಚೇರಿಯ ವಾಹನ ಚಾಲಕ ಕೊಲೆಯ ಸೂತ್ರಧಾರನಾಗಿದ್ದಾನೆ. ಆತನ ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಆತನ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡು ರುದ್ರಣ್ಣನ ದುಡ್ಡು ಹೊಡೆದಿದ್ದಾಳೆ. ಮೃತರಿಗೆ ನ್ಯಾಯ ದೊರೆಯಬೇಕು. ಪ್ರಕರಣವನ್ನು ಮುಚ್ಚಿ ಹಾಕಬಾರದು ಎಂದು ಬರೆಯಲಾದ ಪತ್ರವೊಂದು ಪೋಲಿಸ್ ಠಾಣೆಗೆ ಬಂದಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ ಎಂದು ಹೇಳಲಾಗಿದೆ.