ಕೋಮು ಗಲಭೆಗೆ ಪ್ರಚೋದನೆ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ SDPI ಸಂಘಟನೆಯನ್ನು ನಿಷೇಧಿಸಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಸಂಘಟನೆ ಈಗಾಗಲೇ ಕೆಲವು ರಾಜ್ಯಗಳಲ್ಲಿ ನಿಷೇಧಕ್ಕೊಳಗಾಗಿದ್ದು, ಕೇಂದ್ರ ಸರ್ಕಾರ ಒಂದು ವೇಳೆ ನಿಷೇಧಿಸಿ ಆದೇಶ ಹೊರಡಿಸಿದರೆ ಇದು ದೇಶದಾದ್ಯಂತ ಜಾರಿಗೊಳ್ಳಲಿದೆ.
ಇದರ ಮಧ್ಯೆ ಬಾಗಲಕೋಟೆಯಲ್ಲಿ ಮಾತನಾಡಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಎಸ್.ಡಿ.ಪಿ.ಐ., ಪಿಎಫ್ಐ, ಎಂಐಎಂ ಜೊತೆಗೆ ಆರ್.ಎಸ್.ಎಸ್., ಶ್ರೀರಾಮಸೇನೆ, ಬಜರಂಗದಳ, ವಿಶ್ವ ಹಿಂದು ಪರಿಷತ್ ಸಂಘಟನೆಗಳನ್ನೂ ಸಹ ನಿಷೇಧಿಸಲಿ ಎಂದು ಆಗ್ರಹಿಸಿದ್ದಾರೆ.
ಸ್ವಾತಂತ್ರ ಹೋರಾಟದಲ್ಲಿ ಆರ್.ಎಸ್.ಎಸ್. ಹಾಗೂ ಬಿಜೆಪಿಯವರ ಯಾವುದೇ ಹೋರಾಟವಿರಲಿಲ್ಲ. ಅವರು ಬ್ರಿಟಿಷರ ಏಜೆಂಟರಾಗಿದ್ದರು ಎಂದು ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.