alex Certify SDPI ಮುಖಂಡನ ಬರ್ಬರ ಹತ್ಯೆ, RSS ಕೈವಾಡದ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SDPI ಮುಖಂಡನ ಬರ್ಬರ ಹತ್ಯೆ, RSS ಕೈವಾಡದ ಆರೋಪ

ಕೊಚ್ಚಿ: ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್ ಅವರನ್ನು ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್‌ನಿಂದ ಹಲ್ಲೆಗೊಳಗಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಅವರು ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರಾತ್ರಿ ಅವರು ಮನೆಗೆ ಹಿಂದಿರುಗುತ್ತಿದ್ದಾಗ ಅವರ ಬೈಕ್‌ ಗೆ ಕಾರ್ ಡಿಕ್ಕಿ ಹೊಡೆದಿದೆ. ನೆಲಕ್ಕೆ ಬಿದ್ದ ಅವರಮೇಲೆ ದುಷ್ಕರ್ಮಿಗಳ ಗುಂಪು ದಾಳಿ ಮಾಡಿದೆ. 40 ಕ್ಕೂ ಹೆಚ್ಚು ಗಾಯಗಳಾಗಿದ್ದ ಕೆ.ಎಸ್. ಶಾನ್ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಕೆಲವು ಗಂಟೆಗಳ ನಂತರ ಸಾವನ್ನಪ್ಪಿದ್ದಾರೆ.

ಕೆ.ಎಸ್. ಶಾನ್ ಅವರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದವರೇ ಹತ್ಯೆ ಮಾಡಿದ್ದಾರೆ ಎಂದು ಎಸ್‌ಡಿಪಿಐ ಅಧ್ಯಕ್ಷ ಎಂ.ಕೆ.ಫೈಝಿ ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...