alex Certify ಒಂದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಶಾಲೆ ಸೀಲ್ ಡೌನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಶಾಲೆ ಸೀಲ್ ಡೌನ್

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ದೇವರಹಳ್ಳಿಯ ಜವಾಹರ ನವೋದಯ ವಸತಿ ಶಾಲೆಯ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲೆಯ 4882 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 3667 ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದೆ. ಉಳಿದ ವರದಿಗಳಿಗೆ ಕಾಯಲಾಗುತ್ತಿದೆ. ದೇವರಹಳ್ಳಿಯ ನವೋದಯ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ 539 ಜನರ ಗಂಟಲು ಮಾದರಿ ಪರೀಕ್ಷೆ ಕಳುಹಿಸಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾತ್ಕಾಲಿಕವಾಗಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಉಳಿದವರ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...