ಬೆಂಗಳೂರು : ಸೆಪ್ಟೆಂಬರ್ 22 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಸೆಪ್ಟೆಂಬರ್ 22ರ ಶುಕ್ರವಾರ ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.
ಸಭೆಯಲ್ಲಿ ಪ್ರಮುಖವಾಗಿ ಕಾವೇರಿ ನದಿ ನೀರು ವಿವಾದ, ಲೋಕಸಭೆ ಚುನಾವಣೆ, ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹಾಗೂ ಯೋಜನೆಗಳಿಗೆ ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.
ರಾಜ್ಯ ಸರ್ಕಾರದಿಂದ ಕೂಸಿನ ಮನೆ ಯೋಜನೆ
ಗ್ರಾಮೀಣ ಭಾಗದ ಜನತೆಗೆ ಮತ್ತೊಂದು ವಿಶಿಷ್ಠ ಯೋಜನೆ ರೂಪಿಸಿದೆ ನಮ್ಮ ಸರ್ಕಾರ. ನರೇಗಾ ಕೂಲಿ ಕಾರ್ಮಿಕರು, ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನೆರವಾಗಲು ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 4000 ಗ್ರಾಮ ಪಂಚಾಯತಿಗಳಲ್ಲಿ “ಕೂಸಿನ ಮನೆ” ಶಿಶುಪಾಲನಾ ಕೇಂದ್ರಗಳನ್ನುಲೋಕಾರ್ಪಣೆಗೊಳಿಸಲಾಗುತ್ತಿದೆ. ಗ್ರಾಮೀಣ ಜನರ ಬದುಕನ್ನು ಹಸನಾಗಿಸುವ ಗುರಿಯನ್ನು ನಮ್ಮ ಸರ್ಕಾರ ತಲುಪುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.