ಬೆಂಗಳೂರು : ಅ.26 ರಂದು ಮಂಗಳವಾರ ಬೆಂಗಳೂರು ಬಂದ್ ಫಿಕ್ಸ್ ಆಗಿದೆ. ಇಂದು ಮುಖ್ಯಮಂತ್ರಿ ಚಂದ್ರ ಹಾಗೂ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಪ್ರೀಡಂಪಾರ್ಕ್ ನಲ್ಲಿ ಈ ಬಗ್ಗೆ ಮಾತನಾಡಿದ ಕುರುಬೂರು ಶಾಂತಕುಮಾರ್ ಸೆ.26 ರಂದು ಬೆಂಗಳೂರು ಬಂದ್ ನಡೆಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಬೆಂಬಲ ಘೋಷಿಸಿದೆ. ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ. ಅಂದು ಸಾರಿಗೆ ಬಸ್ ಗಳನ್ನು ರೋಡಿಗೆ ಇಳಿಸುವುದಿಲ್ಲ ಎಂದು ಕೆ.ಎಸ್.ಆರ್. ಟಿ.ಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತಸುಬ್ಬರಾವ್ ತಿಳಿಸಿದ್ದಾರೆ. ಬೆಂಗಳೂರು ಬಂದ್ ಗೆ ಓಲಾ, ಊಬರ್ ಸೇರಿದಂತೆ ಕ್ಯಾಬ್ ಸಂಸ್ಥೆಗಳು ಬೆಂಬಲ ಘೋಷಿಸಿದೆ. ಅದೇ ರೀತಿ ಹೋಟೆಲ್ ಉದ್ಯಮಗಳು ಕೂಡ ಬೆಂಗಳೂರು ಬಂದ್ ಗೆ ಬೆಂಬಲ ನೀಡಿದೆ.
ಸೆ.29 ಕ್ಕೆ ಕರ್ನಾಟಕ ಬಂದ್
ಸೆ.29 ಕ್ಕೆ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಬಗ್ಗೆ ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದರು.ಇದರಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಭಾಗಿಯಾಗಲಿದೆ. ಸಭೆಯಲ್ಲಿ ಕರ್ನಾಟಕ ಬಂದ್ ನ ರೂಪು ರೇಷೆ, ಹೋರಾಟದ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನಾಳೆ ಕರ್ನಾಟಕ ಬಂದ್ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಲಿದೆ ಎಂದಿದ್ದಾರೆ.
ಇನ್ನೂ. ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದರ ನಡುವೆ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.