ಬೆಂಗಳೂರು : ಎಸ್ಎಸ್ಎಲ್ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯ ಮಾಪನ – 1) ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1ರ ವರೆಗೆ ನಡೆಯಲಿದೆ.
ಇದೇ ಮೊದಲ ಬಾರಿಗೆ ಎಲ್ಲ ಪ್ರೌಢಶಾಲೆಗಳಲ್ಲೂ ಏಕರೂಪದ ಪರೀಕ್ಷೆ ನಡೆಸಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲ ವಿಷಯಗಳ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುತ್ತದೆ. ಪರೀಕ್ಷಾ ಸಮಯಕ್ಕೆ ಸರಿಯಾಗಿ ಎಲ್ಲ ಶಾಲೆಗಳಿಗೂ ತಲುಪಲಿವೆ. ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ಅಕ್ಟೋಬರ್ 1 ರಂದು ಮಧ್ಯಾಹ್ನ ಆಯಾ ಶಾಲೆಗಳಲ್ಲಿ ನಡೆಸಲು ಮಂಡಳಿ ಸೂಚಿಸಿದೆ.
ವೇಳಾಪಟ್ಟಿ
ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪ್ರಥಮ ಭಾಷೆ –ಕನ್ನಡ, ಹಿಂದಿ, ಇಂಗ್ಲಿಷ್
ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ದ್ವಿತೀಯ ಭಾಷೆ –ಇಂಗ್ಲಿಷ್, ಹಿಂದಿ, ಮಧ್ಯಾಹ್ನ ತೃತೀಯ ಭಾಷೆ –ಹಿಂದಿ, ಕನ್ನಡ, ಇಂಗ್ಲಿಷ್ ಪರೀಕ್ಷೆಗಳು ನಡೆಯಲಿವೆ.ಸೆಪ್ಟೆಂಬರ್ 26ರಂದು ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಎನ್.ಎಸ್.ಕ್ಯೂ.ಎಫ್. ವಿಷಯಗಳು ಪರೀಕ್ಷೆ ನಡೆಯಲಿವೆ.
ಸೆಪ್ಟಂಬರ್ 27ರಂದು ಕೋರ್ ವಿಷಯಗಳಾದ ಗಣಿತ, ಸಮಾಜಶಾಸ್ತ್ರ, ವಿಜ್ಞಾನ,
ಸೆಪ್ಟೆಂಬರ್ 28 ರಂದು ರಾಜ್ಯಶಾಸ್ತ್ರ, ಹಿಂದುಸ್ಥಾನಿ ಸಂಗೀತ
ಸೆಪ್ಟೆಂಬರ್ 30ರಂದು ಸಮಾಜ ವಿಜ್ಞಾನ
ಅಕ್ಟೋಬರ್ 1 ರಂದು ಜೆಟಿಎಸ್ ವಿಷಯಗಳ ಪರೀಕ್ಷೆ ನಡೆಸಲಾಗುವುದು.