ಬೆಂಗಳೂರು: ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಪಾಸಾದವರಿಗೆ ಪದವಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಇತ್ತೀಚೆಗಷ್ಟೇ ಪ್ರಕಟಿಸಲಾದ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಫಲಿತಾಂಶದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪದವಿ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆಯಲು ಕಾಲೇಜು ಶಿಕ್ಷಣ ಇಲಾಖೆಯಿಂದ ಅವಕಾಶ ಕಲ್ಪಿಸಲಾಗಿದೆ.
ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ಪೂರಕ ಪರೀಕ್ಷೆ 2ರಲ್ಲಿ ಪಾಸಾದ ವಿದ್ಯಾರ್ಥಿಗಳು ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆದುಕೊಳ್ಳಬಹುದು. ಈ ಸಂಬಂಧ ಕಾಲೇಜುಗಳು ನೋಟಿಸ್ ಬೋರ್ಡ್ ನಲ್ಲಿ ಮಾಹಿತಿ ಪ್ರಕಟಿಸಬೇಕು. ಉನ್ನತ ಶಿಕ್ಷಣ ಇಲಾಖೆಯ ಸಮಗ್ರ ವಿವಿ ಕಾಲೇಜು ನಿರ್ವಹಣಾ ವ್ಯವಸ್ಥೆ ವೆಬ್ಸೈಟ್ ಮೂಲಕ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲವಾಗುವಂತೆ ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಬಳಸಿಕೊಳ್ಳಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.