ಬೆಂಗಳೂರು : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ವೇಳಾಪಟ್ಟಿ ಮಂಡಳಿಯ ಜಾಲತಾಣದಲ್ಲಿ ಬಿಡುಗಡೆಯಾಗಿದ್ದು, ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.
2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ. ಫಲಿತಾಂಶ ತಿರಸ್ಕರಿಸಲು ಸದರಿ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ. ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಈ ಅವಕಾಶವನ್ನು ಅರ್ಹ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಲು ತಿಳಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿದೆ.

