ಪೋಷಕರಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಜೂನ್ 24ರ ವರೆಗೆ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ|| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಚೆ / ಆಯ್ಕೆಗಳ ಆಧಾರದ ಮೇಲೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 15-06-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 24-06-2024 ರ ಸಂಜೆ 5.30 ರ ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.

Phone: 080-23 564 583

Helpline: 080-23 460 460.

e-mail: keauthority-ka@nic.in

Website: http://kea.kar.nic.in

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read