ಬೆಂಗಳೂರು : ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಅವಧಿಯಲ್ಲಿ ಪರೀಕ್ಷೆ ಕೇಂದ್ರದ ಸುತ್ತಾಮುತ್ತಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರ ಮೇರೆಗೆ ನಿರ್ಭಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಮುಚ್ಚುವಂತೆಯೂ ಮತ್ತು ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶ ಹೊರಡಿಸಲಾಗಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕೆಎಸ್ ಆರ್ ಟಿಸಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ)
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024 ಸೋಮವಾರ ಗಣಿತ ಪರೀಕ್ಷೆ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ